ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ,ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಪದಾಧಿಕಾರಿಗಳ ಸಭೆ ಸುಳ್ಯ ಯೋಜನಾ ಕಛೇರಿಯ ಸಭಾಂಗಣ ನಡೆಯಿತು. ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ವಿಶ್ವನಾಥ ರೈ ಕಳಂಜ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಎನ್.ಎ. ರಾಮಚಂದ್ರ ಉದ್ಘಾಟಿಸಿದರು. ಸಭೆಯಲ್ಲಿ
ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ನಡೆಯುವ ಕಾರ್ಯಕ್ರಮದ ರೂಪುರೇಷೆಯ ಕುರಿತು ಚರ್ಚಿಸಲಾಯಿತು. ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ 12 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಅಧ್ಯಕ್ಷ ಎಂ.
ವೆಂಕಪ್ಪ ಗೌಡ, ಕಡಬ ತಾಲೂಕು ಮಾಜಿ ಅಧ್ಯಕ್ಷ ಇಂದುಶೇಖರ್,ಪುತ್ತೂರು ತಾಲೂಕು ಅಧ್ಯಕ್ಷ ಸತೀಶ್ ನಾಯ್ಕ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಸಮಿತಿ ತಾಲೂಕು ಅಧ್ಯಕ್ಷ
ಸುರೇಶ್ ಕಣೆಮರಡ್ಕ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ, ಸುಳ್ಯ ಜನಜಾಗೃತಿ ವೇದಿಕೆಯ
ನಿಕಟಪೂರ್ವ ಅಧ್ಯಕ್ಷ ಭವಾನಿಶಂಕರ ಅಡ್ತಲೆ, ಮಹೇಶ್ ರೈ ಮೇನಾಲ, ಬೂಡು ರಾಧಾಕೃಷ್ಣ ರೈ, ಲೋಕನಾಥ ಅಮೆಚೂರು ಕಡಬ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಮಹೇಶ್ ಕುಮಾರ್, ಅಖಿಲ ಕರ್ನಾಟಕ ಜನಜಾಗೃತಿ ಜಿಲ್ಲಾ ಕೋಆಪ್ಟ್ ಸದಸ್ಯರು, ಕಡಬ ತಾಲೂಕು ಯೋಜನಾಧಿಕಾರಿ ಪ್ರಶಾಂತ್, ಪುತ್ತೂರು ಯೋಜನಾಧಿಕಾರಿ ಶಶಿಧರ್, ತಾಲೂಕು ಜನ ಜಾಗೃತಿ ವೇದಿಕೆಯ ವಲಯಾಧ್ಯಕ್ಷರು ,ಪದಾಧಿಕಾರಿಗಳು, ವಲಯದ ಮೇಲ್ವಿಚಾರಕರು, ಶೌರ್ಯ ವಿಪತ್ತು ಘಟಕದ ಮಾಸ್ಟರ್ ಮತ್ತು ಕ್ಯಾಪ್ಟನ್, ಒಕ್ಕೂಟದ ಅಧ್ಯಕ್ಷರು ಹಾಗೂ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಸುಳ್ಯ ತಾಲೂಕು ಅಧ್ಯಕ್ಷ ಸವಿತಾ ಸಂದೇಶ್ ಪ್ರಾರ್ಥಿಸಿದರು. ಯೋಜನಾಧಿಕಾರಿ
ಮಾಧವ ಗೌಡ ಸ್ವಾಗತಿಸಿ , ಸಂಪಾಜೆ ವಲಯದ ಮೇಲ್ವಿಚಾರಕ ಹರೀಶ್ ಆಚಾರ್ಯ ವಂದಿಸಿದರು. ಗುತ್ತಿಗಾರು ವಲಯದ ಮೇಲ್ವಿಚಾರಕ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.









