ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿದರು. ಜನತಾದರ್ಶನದಲ್ಲಿ ಜನರ ಅಹವಾಲುಗಳನ್ನು ಆಲಿಸಿದ ಬಳಿಕ
ಮಾತನಾಡಿದ ಸಚಿವ ಗುಂಡೂರಾವ್, ಮುಂದಿನ ದಿನಗಳಲ್ಲಿ ಜಿಲ್ಲೆಯ ತಾಲೂಕುಗಳಲ್ಲೂ ಜನತಾ ದರ್ಶನ ಆಯೋಜಿಸಲಾಗುವುದು ಎಂದರು.ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಡಿಸಿ ಮುಲ್ಲೈ ಮುಗಿಲನ್, ಜಿಪಂ ಸಿಇಒ ಡಾ.ಆನಂದ , ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ , ಎಸ್ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ವೇದಿಕೆಯಲ್ಲಿದ್ದರು.