ಸುಳ್ಯ: ಜ.23ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕಿನಲ್ಲಿ ಜನತಾ ದರ್ಶನ ಕಾರ್ಯಕ್ರಮ 23 ರಂದು ಕೆ.ವಿ.ಜಿ ಪುರಭವನದಲ್ಲಿ ನಡೆಯಲಿದೆ. ಜನತಾ ದರ್ಶನಕ್ಕೆ ಆಗಮಿಸುವ ಸಾರ್ವಜನಿಕರ ವಾಹನಗಳನ್ನು
ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಪ್ರಾಂಗಣದಲ್ಲಿ ನಿಲುಗಡೆ ಮಾಡಬೇಕು. ಉಸ್ತುವಾರಿ ಸಚಿವರು,ವಿಧಾನಸಭಾ ಸದಸ್ಯರು, ಚುನಾಯಿತ ಪ್ರತಿನಿಧಿಗಳಿಗೆ ಸಂಬಂಧಿಸಿದ ವಾಹನಗಳು, ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸಂಬಂಧಿಸಿದ ವಾಹನಗಳನ್ನು ಶ್ರೀ ದುರ್ಗಾಪರಮೇಶ್ವರಿ ಸಭಾಂಗಣದ ಒಳಾಂಗಣದಲ್ಲಿ ನಿಲುಗಡೆಗೆ ಅವಕಾಶವನ್ನು ಮಾಡಲಾಗಿರುತ್ತದೆ ಎಂದು ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












