ಸುಳ್ಯ: ನಾಡಹಬ್ಬಗಳ ಆಚರಣಾ ಸಮಿತಿ ಸುಳ್ಯ ಹಾಗೂ ಯಾದವ ಸಭಾ ಸುಳ್ಯ ತಾಲೂಕು ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಸುಳ್ಯ ತಾಲೂಕು ಕಚೇರಿಯಲ್ಲಿ ನಡೆಯಿತು. ಪಟ್ಟಣ ಪಂಚಾಯತ್
ಅಧ್ಯಕ್ಷೆ ಶಶಿಕಲಾ ಎ ನೀರಬಿದಿರೆ ಅಧ್ಯಕ್ಷತೆ ವಹಿಸಿದ್ದರು.ಸಾವಿತ್ರಿ ಕಣೆಮರಡ್ಕ ಉಪನ್ಯಾಸ ನೀಡಿದರು.ಯಾದವ ಸಭಾ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ ,ಉಪತಹಶೀಲ್ದಾರ್ ಚಂದ್ರಶೇಖರ, ಜಯಕೃಷ್ಣ , ಶೀಲಾ ಅರುಣ ಕುರುಂಜಿ , ಗಂಗಾಧರ , ಸುಧಾಮ , ರಾಮಚಂದ್ರ ಹಾಗೂ ನಾಡಹಬ್ಬಗಳ ಆಚರಣಾ ಸಮಿತಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸುಳ್ಯ ತಾಲೂಕು ಕಚೇರಿ ಸಿಬ್ಬಂದಿಗಳು ಮತ್ತು ಯಾದವ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.





