ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ 1 ವರ್ಷ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜುಲೈ 28ರಂದು (ಗುರುವಾರ) ಆಯೋಜಿಸಿದ್ದ ಜನೋತ್ಸವ ಸಾಧನಾ ಸಮಾವೇಶ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಆರ್.ಟಿ ನಗರದ ಖಾಸಗಿ ನಿವಾಸದಲ್ಲಿ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮಾಹಿತಿ ನೀಡಿದರು. ಪ್ರವೀಣ್ ಹತ್ಯೆ ತೀವ್ರ
ನೋವಾಯಿತು. ಈ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ಹಾಗೂ ಸರಕಾರದ ವತಿಯಿಂದ ವಿಧಾನಸೌಧದಲ್ಲಿ ನಿಗದಿಯಾಗಿದ್ದ ಜನೋತ್ಸವ ಸಾಧನಾ ಸಮಾವೇಶ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು. ಪ್ರವೀಣ್ ಕುಟುಂಸ್ಥರು ಮತ್ತು ಹರ್ಷನ ತಾಯಿ ನೋವನ್ನು ನೋಡಿ ಈ ನಿರ್ಧಾರ ಕೈಗೊಂಡಿದ್ದೇನೆ. ಜನಪರವಾಗಿ ನಾವು ಏನು ಕೆಲಸ ಮಾಡಿದ್ದೇವೆ ಅದು ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ತಿಳಿಸಿದರು.ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗಹವಿಸುವವರಿದ್ದರು.