ಸುಳ್ಯ:ಸುಳ್ಯ ಜಟ್ಟಿಪಳ್ಳ ರಸ್ತೆ ಬದಿಯಲ್ಲಿ ಗುಡ್ಡೆಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ.ಸ್ಥಳೀಯರು ಅಗ್ನಿಶಾಮಕ ಕಚೇರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವ ಕಾರ್ಯವನ್ನು ಮಾಡಿದ್ದಾರೆ. ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಹಾಗೂ ಸ್ಥಳೀಯರು ಸಹಕರಿಸಿದರು.