ಸುಳ್ಯ:ಮೇರಾ ಯುವ ಭಾರತ್ ದಕ್ಷಿಣ ಕನ್ನಡ ಮತ್ತು ಮಾನಸ ಮಹಿಳಾ ಮಂಡಲ ಜಟ್ಟಿಪಳ್ಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಹಿ ಸೇವಾ ಇದರ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಜಟ್ಟಿಪಳ್ಳದ ಯುವಸದನದ ವಠಾರದಲ್ಲಿ ನಡೆಯಿತು. ಮಾನಸ ಮಹಿಳಾ ಮಂಡಲದ ಗೌರವಾಧ್ಯಕ್ಷೆ ಚಂದ್ರಾಕ್ಷಿ ಜೆ ರೈ ಸ್ವಚ್ಛತೆಯ ಪ್ರತಿಜ್ಞಾ ವಿಧಿ ಬೋದಿಸಿದರು.ಮಹಿಳಾ ಮಂಡಲದ ಅಧ್ಯಕ್ಷೆ ಸವಿತಾ ಸತೀಶ್ ಸ್ವಾಗತಿಸಿದರು. ಪೂರ್ವಾಧ್ಯಕ್ಷೆ ಚಿತ್ರಲೇಖಾ ಮಡಪ್ಪಾಡಿ ವಂದಿಸಿದರು. ಮಹಿಳಾ ಮಂಡಲದ ಸದಸ್ಯರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









