ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಮಂಗಳೂರು ಇದರ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಸುಳ್ಯದ ಇಂಜಿನಿಯರ್ ಮಣಿಕಂಠ ಅವರು ಜಾವಲಿನ್ ತ್ರೋ ದಲ್ಲಿ
ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನದೊಂದಿಗೆ ಮಣಿಕಂಠ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸರಕಾರಿ ನೌಕರರ ಕ್ರೀಡಾ ಕೂಟದ ಜಾವಲಿನ್ ಎಸೆತದಲ್ಲಿ ಮಣಿಕಂಠ ಅವರು ಸತತ 5ನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಹಿಂದೆ ರಾಜ್ಯಮಟ್ಟದಲ್ಲಿ ಎರಡು ಬಾರಿ ಚಿನ್ನದ ಪದಕ ಹಾಗೂ ಒಂದು ಬಾರಿ ಬೆಳ್ಳಿ ಪದಕ ಪಡೆದಿದ್ದರು.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯ ಸುಳ್ಯ ಉಪ ವಿಭಾಗದಲ್ಲಿ ಸಹಾಯಕ ಇಂಜಿನಿಯರ್ ಅಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.