ಹ್ಯಾಂಗ್ ಝೌ:ಏಷ್ಯನ್ ಗೇಮ್ಸ್ನಲ್ಲಿ ಭಾರತ ತನ್ನ ಪದಕ ಬೇಟೆಯನ್ನು ಮುಂದುವರಿಸಿದ್ದು ಜಾವಲಿನ್ ಎಸೆತ ಹಾಗೂ 5000 ಮೀಟರ್ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ.ಜಾವೆಲಿನ್ ಎಸೆತಗಾರ್ತಿ ಅನ್ನು ರಾಣಿ ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ
ಜಯಿಸಿದರು. ಆ ಮೂಲಕ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಮಹಿಳೆಯರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 62.92 ಮೀಟರ್ಗಳ ಅತ್ಯುತ್ತಮ ಎಸೆತದೊಂದಿಗೆ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಪಾರುಲ್ ಚೌದರಿ 5000 ಮೀಟರ್ ಓಟದಲ್ಲಿ ಚಿನ್ನ ಗೆದ್ದರು. ಮೊದಲ ಭಾರಿಗೆ ಮಹಿಳೆಯರ 5000 ಮೀಟರ್ನಲ್ಲಿ ಭಾರತ ಚಿನ್ನ ಗೆದ್ದಿದೆ. 15.14 ನಿಮಿಷದಲ್ಲಿ 5000 ಮೀಟರ್ ಓಡಿ ಪಾರುಲ್ ಚಿನ್ನ ಗೆದ್ದರು.