ಸುಳ್ಯ: ಧಾರವಾಡದಲ್ಲಿ ನಡೆದ 45ನೇ ರಾಜ್ಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್ಶಿಪ್ನ ಜಾವೆಲಿನ್ ಎಸೆತದಲ್ಲಿ ಸುಳ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಮಣಿಕಂಠನ್ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ
ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.45 ಮೀಟರ್ ದೂರ ಜಾವಲಿನ್ ಎಸೆಯುವ ಮೂಲಕ ಅವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಜನವರಿಯಲ್ಲಿ ಲಕ್ನೋದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟ ನಡೆಯಲಿದೆ. ಈ ಹಿಂದೆ ಎರಡು ಬಾರಿ ಮಣಿಕಂಠನ್ ಅವರು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.















