ಮುಂಬೈ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮುಂದಿನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಕ್ಟೋಬರ್ 2019 ರಿಂದ ಬಿಸಿಸಿಐ ಗೌರವ ಕಾರ್ಯದರ್ಶಿಯಾಗಿ ಮತ್ತು
ಜನವರಿ 2021 ರಿಂದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಜಯ್ ಶಾ ಅವರು ಮುಂದಿನ ಡಿಸೆಂಬರ್ 1ರಂದು ಐಸಿಸಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ.
ಈವರೆಗೆ ಅಧ್ಯಕ್ಷರಾಗಿದ್ದ ಗ್ರೇಗ್ ಬಾರ್ಕ್ಲಿ ಅವರು ಮುಂದಿನ ಅವಧಿಗೆ ಮುಂದುವರಿಯದಿರುಲು ನಿರ್ಧರಿಸಿದ್ದಾರೆ. ಹೀಗಾಗಿ ಅಧ್ಯಕ್ಷೀಯ ಪದವಿಗೆ ನಡೆದ ಚುನಾವಣೆಯಲ್ಲಿ ಜಯ್ ಶಾ ಅವರು ಏಕೈಕ ಸ್ಪರ್ಧಿಯಾಗಿದ್ದರು. ಈ ಹಿನ್ನಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.