ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿಯ ವತಿಯಿಂದ ಜೇಸಿ ಸಪ್ತಾಹದ ಮೂರನೇ ದಿನದ ಅಂಗವಾಗಿ ಹದಿಹರೆಯದವರ ಆರೋಗ್ಯ ಸಮಸ್ಯೆಗಳ ಮಾಹಿತಿ ಶಿಬಿರ ಮತ್ತು ಆತ್ಮಹತ್ಯೆ ತಡೆ ದಿನಾಚರಣೆಯನ್ನು
ಎಲಿಮಲೆಯ ಮೆಟ್ರಿಕ್ ನಂತರದ ಬಿ.ಸಿ.ಎಂ ವಿದ್ಯಾರ್ಥಿನಿ ನಿಲಯದಲ್ಲಿ ನಡೆಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ
ಜಿಲ್ಲಾಧಿಕಾರಿ ಬಿಂದಿಯಾ ಮುಖ್ಯ ಅಥಿತಿ ಗಳಾಗಿ ಭಾಗವಹಿಸಿ ಶುಭ ಹಾರೈಸಿದರು.ಸಭಾಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿಯ ಘಟಕಾದ್ಯಕ್ಷ ಗುರುಪ್ರಸಾದ್ ನಾಯಕ್ ವಹಿಸಿದ್ದರು.
ಮುಖ್ಯ ಅಥಿತಿಗಳಾಗಿ ಜೆಸಿ ಪೂರ್ವಾಧ್ಯಕ್ಷ ಹೆಚ್. ಭೀಮರಾವ್ ವಾಸ್ಟರ್ ಶುಭ ಹಾರೈಸಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಭಾಗವಹಿಸಿ ವಿದ್ಯಾರ್ಥಿನಿಯರಿಗೆ ಹದಿ ಹರೆಯದವರ ಆರೋಗ್ಯ ಸಮಸ್ಯೆ ಕುರಿತು ಮಾಹಿತಿ ನೀಡಿದರು.
ಸಪ್ತಾಹ ನಿರ್ದೇಶಕರಾದ ಸುರೇಶ್ ಕಾಮತ್ ವಂದಿಸಿದರು.
ಈ ಕಾರ್ಯಕ್ರಮ ದಲ್ಲಿ ನಿಲಯದ ಮೇಲ್ವಿಚಾರಕಿ ದೀಪಿಕಾ, ಸಹಾಯಕಿ ಸತ್ಯಭಾಮಾ, ಅಡುಗೆ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.