ಸುಳ್ಯ:ಜೇಸಿಐ ಸುಳ್ಯ ಪಯಸ್ವಿನಿ ಜೇಸಿಐ ಸಪ್ತಾಹ ‘ಸುಸ್ನಿಲ’2026 ಆ.30ರಂದು ಉದ್ಘಾಟನೆಗೊಂಡಿತು. ಸುಳ್ಯದ ಪಿಎಂಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಜೇಸಿಐ ಭಾರತ ವಲಯ 15ರ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ವಲಯ ಸಂಯೋಜಕರಾದ ಲೋಕೇಶ್ ಅಕ್ರಿಕಟ್ಟೆ ದೀಪ ಬೆಳಗಿಸಿ ಸಪ್ತಾಹಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.ಜೆಸಿಐ
ಸುಳ್ಯ ಪಯಸ್ವಿನಿ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಜೇಸಿಐ ಸುಳ್ಯ ಪಯಸ್ವಿನಿಯ ಮಾಜಿ ಅಧ್ಯಕ್ಷರಾದ ಅಬ್ದುಲ್ಲಾ ಎ, ಗುರುರಾಜ್ ಅಜ್ಜಾವರ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರವಿರಾಜ್ ಅಡ್ಕಾರ್, ಪತ್ರಕರ್ತ ಡಾ.ಯು.ಪಿ ಶಿವಾನಂದ, ಕ್ರಿಯೇಟಿವ್ ಸ್ಕೂಲ್ ಆಫ್ ಆರ್ಟ್ಸ್ನ ನಿರ್ದೇಶಕರಾದ ಶ್ರೀಹರಿ ಪೈಂದೋಡಿ, ಪ್ರಸನ್ನ ಐವರ್ನಾಡು ಭಾಗವಹಿಸಿ

ಶುಭ ಹಾರೈಸಿದರು.ಸಪ್ತಾಹ ನಿರ್ದೇಶಕ ವಿನೋದ್ ಮೂಡಗದ್ದೆ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು.
ಪ್ರಸನ್ನ ಎಂ. ಆರ್. ಅತಿಥಿಗಳನ್ನು ವೇದಿಕೆಗೆ ಅಹ್ವಾನಿಸಿದರು.
ಸ್ನಿಗ್ಧ ಮೋಂಟಡ್ಕ ಜೇಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ತಾರಾ ಚೂಂತಾರು ವಂದಿಸಿದರು.ಉದ್ಘಾಟನಾ ಕಾರ್ಯಕ್ರಮದ ಬಳಿಕ ಕ್ರಿಯೇಟಿವ್ ಸ್ಕೂಲ್ ಆಪ್ ಆರ್ಟ್ಸ್ ಇವರ ಸಹಕಾರದೊಂದಿಗೆ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನಾಲ್ಕು ವಿಭಾಗದಲ್ಲಿ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಸೆ.15ರ ತನಕ ಆಯ್ದ ದಿನಗಳಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜೇಸಿಐ ಸಪ್ತಾಹ ನಡೆಯಲಿದೆ










