ಸುಳ್ಯ:ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ನಂದಗೋಕುಲ-ಮುದ್ದು ಕೃಷ್ಣ ರಾದೆ ಸ್ಪರ್ಧೆ ಹಾಗೂ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ ನಡೆಯಿತು.ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕಾಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿದ್ದರು. ಶಾಲಾ
ಸಂಚಾಲಕಿ ಗೀತಾಂಜಲಿ ಟಿ. ಜಿ., ಜೇಸಿಐ ಸುಳ್ಯ ಪಯಸ್ವಿಯ ಕಾರ್ಯದರ್ಶಿ ತಾರಾ ಚೂಂತಾರು, ಸಪ್ತಾಹ ನಿರ್ದೇಶಕ ವಿನೋದ್ ಎಂ. ಎನ್ ಉಪಸ್ಥಿತರಿದ್ದರು. ಶಾಲೆಯ ಪುಟಾಣಿ ಮಕ್ಕಳು ಮುದ್ದು ಕೃಷ್ಣ, ರಾದೆ ವೇಷಧಾರಣೆಯೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಪದಾಧಿಕಾರಿಗಳು, ವಿದ್ಯಾರ್ಥಿಗಳ ಹೆತ್ತವರು, ಸಂಸ್ಥೆಯ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು. ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.










