ಪಂಜ:ಜೇಸಿಐ ಪಂಜ ಪಂಚಶ್ರೀ ಇದರ ಬೆಳ್ಳಿ ಹಬ್ಬ-‘ರಜತ ರಶ್ಮಿ’ ಕಾರ್ಯಕ್ರಮದ ಅಂಗವಾಗಿ ರಜತ ಚಿತ್ತಾರ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನ.11. ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು. ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಶಿವಪ್ರಸಾದ್ ಹಾಲೆಮಜಲು ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು
ಜಿಲ್ಲಾ ಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ತಾರಾನಾಥ್ ಕೈರಂಗಳ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಪೂರ್ವ ವಲಯಾಧಿಕಾರಿ ಪ್ರದೀಪ್ ಕುಮಾರ್ ರೈ ಪನ್ನೆ, ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ಮಾತನಾಡಿದರು. ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ಮತ್ತು ಘಟಕದ ಸ್ಥಾಪಕಾಧ್ಯಕ್ಷ ದೇವಿಪ್ರಸಾದ್ ಜಾಕೆ, ಬೆಳ್ಳಿ ಹಬ್ಬ ಸಮಿತಿಯ ಕಾರ್ಯದರ್ಶಿ ತೀರ್ಥಾನಂದ ಕೊಡೆಂಕಿರಿ, ಬೆಳ್ಳಿ ಹಬ್ಬ ಕಾರ್ಯಕ್ರಮ ನಿರ್ದೇಶಕ ಲೋಕೇಶ್ ಆಕ್ರಿಕಟ್ಟೆ, ರಜತ ಚಿತ್ತಾರ ಕಾರ್ಯಕ್ರಮ ಸಂಯೋಜಕ ಸೋಮಶೇಖರ ನೇರಳ,ಘಟಕದ ನಿಕಟ ಪೂರ್ವಾಧ್ಯಕ್ಷ ಗಣೇಶ್ ಪ್ರಸಾದ್ ಭೀಮಗುಳಿ,ಕಾರ್ಯದರ್ಶಿ ಕೌಶಿಕ್ ಕುಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೂರ್ವ ವಲಯಾಧಿಕಾರಿ ಪ್ರದೀಪ್ ಕುಮಾರ್ ರೈ ಪನ್ನೆ ಮತ್ತು ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ರವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಪುನೀತ್ ಮೂಲೆಮನೆ ವೇದಿಕೆಗೆ ಆಹ್ವಾನಿಸಿದರು.ಪವನ್ ಮೂಲೆಮನೆ ಜೇಸಿ ವಾಣಿ ವಾಚಿಸಿದರು.ಸೋಮಶೇಖರ ನೇರಳ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಅಶೋಕ್ ಕುಮಾರ್, ಚರಣ್ ದೇರಪ್ಪಜ್ಜನಮನೆ , ನಾಗ್‌ಮಣಿ ಕೆದಿಲ ಅತಿಥಿಗಳನ್ನು ಪರಿಚಯಿಸಿದರು. ಪ್ರಸನ್ನ ವೈ ಟಿ ವಂದಿಸಿದರು.
ವಿಚಾರಗೋಷ್ಠಿ: ಸಭಾ ಕಾರ್ಯಕ್ರಮದ ಬಳಿಕ
ಪೋಷಕರಿಗಾಗಿ ವಿಚಾರಗೋಷ್ಠಿ-ಸೃಜನಶೀಲ ಬದುಕಿನಲ್ಲಿ ಚಿತ್ರಕಲೆ ಎಂಬ ವಿಷಯದಲ್ಲಿ ವಿಚಾರಗೋಷ್ಠಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಕೊಡಗು ಶಿಕ್ಷಣ ಚಿಂತಕ ಊ. ರಾ ನಾಗೇಶ್ ಪಾಲ್ಗೊಂಡಿದ್ದರು.