ಸುಳ್ಯ:ಜೇಸಿಐ ಸುಳ್ಯ ಪಯಸ್ವಿಯ ವತಿಯಿಂದ ವಿಶ್ವ ಅಂಚೆ ದಿನದ ಅಂಗವಾಗಿ ಸುಳ್ಯದ ಕುರುಂಜಿಭಾಗ್ನ ಪೋಸ್ಟ್ ವುಮನ್ ಅನುರಾಧ ಟಿ ಯವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಎಸ್.ಗಂಗಾಧರ ಅವರನ್ನು ಗೌರವಿಸಲಾಯಿತು.ಜೇಸಿಐ
ಸುಳ್ಯ ಪಯಸ್ವಿನಿ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿದ್ದರು.ಜೆಸಿಐ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ಅಭಿನಂದನಾ ಭಾಷಣ ಮಾಡಿದರು.ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ರಾಜಣ್ಣ ಮುಖ್ಯ ಅತಿಥಿಗಳಾಗಿದ್ದರು.
ವೇದಿಕೆಯಲ್ಲಿ ಘಟಕದ ನಿಕಟಪೂರ್ವ ಅಧ್ಯಕ್ಷ ಸುರೇಶ್ ಕಾಮತ್, ಕಾರ್ಯದರ್ಶಿ ತಾರಾ ಚೂಂತಾರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಘಟಕದ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದರು. ಸತ್ಯ ಶಾಂತಿ ತ್ಯಾಗ ಮೂರ್ತಿ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಯಶಿಕಾ ಚೂಂತಾರು ಜೇಸಿವಾಣಿ ಹಾಗೂ ಪ್ರಶಾಂತ್ ಅಂಬೆಕಲ್ಲು ಸನ್ಮಾನಿತರ ಸನ್ಮಾನಪತ್ರವನ್ನು ವಾಚಿಸಿದರು.










