ಸುಳ್ಯ:ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸುಳ್ಯದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಜೇಸಿಐ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕ ಸಮಾರಂಭದ
ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ವಿನೋದ್ ಲಾಸ್ರಾದೊ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಉನಿಲಯ ಮೇಲ್ವಿಚಾರಕಿ ಗೀತಾ ಉಪಸ್ಥಿತರಿದ್ದರು ಗಾಂಧಿ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಆಶುಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಜೇಸಿಐ ಅಧ್ಯಕ್ಷೆ ಲತಾಶ್ರಿ ನಿಲಯದ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.ಮಾಜಿ ಅಧ್ಯಕ್ಷ ಗುರುಪ್ರಸಾದ್ ನಾಯಕ್ ಅತಿಥಿಗಳನ್ನು ಆಹ್ವಾನಿಸಿದರು.ಪ್ರಸನ್ನ ಎಂ.ಆರ್. ಜೇಸಿ ವಾಣಿ ವಾಚಿಸಿದರು ಕಾರ್ಯದರ್ಶಿ ತಾರಾ ಚೂಂತಾರು ವಂದಿಸಿದರು.ಬಳಿಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸುಪ್ರೀತ್ ಮೋಂಟಡ್ಕ, ನಿಲಯದ ಸಿಬ್ಬಂದಿಗಳು, ಜೇಸಿ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









