ಸುಳ್ಯ:ಜೇಸಿಐ ಸುಳ್ಯ ಪಯಸ್ವಿನಿ ಸುಳ್ಯ ಘಟಕದ ವತಿಯಿಂದ ಆಯೋಜಿಸಲಾಗಿರುವ ಜೇಸಿಐ ಸಪ್ತಾಹ 2026ರ ಸಮಾರೋಪ ಸಮಾರಂಭ ಸೆ.15ರಂದು ಸಂಜೆ 6.30ಕ್ಕೆ ಅಂಬಟೆಅಡ್ಕ, ಸುಳ್ಯ, ಆರೋಹಿ ಎನ್ಕ್ಲೀವ್ ಸಭಾಂಗಣದಲ್ಲಿ ನಡೆಯಲಿದೆ. ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವ ಸಲುವಾಗಿ ಸಮಾರೋಪ ಸಮಾರಂಭದಲ್ಲಿ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಜೇಸಿಐಯ ಪ್ರತಿಷ್ಠಿತ ಕಮಲ ಸಹರನ್ ಅವರ ಹೆಸರಿನಲ್ಲಿ
ಕೊಡಮಾಡುವ “ಕಮಲಪತ್ರ” ಪುರಸ್ಕಾರವನ್ನು ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷ ಭೀಮರಾವ್ ವಾಷ್ಠರ್ ಅವರಿಗೆ ಪ್ರದಾನ ಮಾಡಲಾಗುವುದು.ಜೇಸಿಐ ಸುಳ್ಯ ಪಯಸ್ವಿನಿ ಘಟಕದ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಪಯಸ್ವಿನಿಶ್ರೀ” ಪುರಸ್ಕಾರವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು, ಸುಳ್ಯದ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ. ಅವರಿಗೆ ನೀಡಿ ಗೌರವಿಸಲಾಗುವುದು.
“ಕಲಾಶ್ರೀ” ಪುರಸ್ಕಾರವನ್ನು ಗಾನಗಂಧರ್ವ ಖ್ಯಾತಿಯ ಗಾಯಕ, ಸಂಗೀತ ನಿರ್ದೇಶಕ ಹಾಗೂ ಚಲನಚಿತ್ರ ನಟರಾದ ಶಶಿಧರ ಕೋಟೆ ಅವರಿಗೆ

ಪ್ರದಾನ ಮಾಡಲಾಗುವುದು.
‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿಯನ್ನು ಉಪ ತಹಶೀಲ್ದಾರ್ ಅವಿನ್ ರಂಗತ್ತಮಲೆ ಹಾಗೂ ಮ್ಯಾರಥಾನ್ ಕ್ರೀಡಾಪಟು ವಿನಯ್ ನಾರಾಲು ಅವರಿಗೆ ಪ್ರದಾನಮಾಡಲಾಗುವುದು.
ಸೆಪ್ಟೆಂಬರ್ 15ರಂದು ಮಂಗಳವಾರ ಸಂಜೆ 6.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅತಿಥಿ ಗಣ್ಯರು, ಜೇಸಿಐ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೊಂಟಡ್ಕ ತಿಳಿಸಿದ್ದಾರೆ.










