ಧರ್ಮಸ್ಥಳ: ರಾಜ್ಯ ಜೆಡಿಎಸ್ ವತಿಯಿಂದ ‘ಧರ್ಮಸ್ಥಳ ಸತ್ಯ ಯಾತ್ರೆ’ ವಾಹನ ರ್ಯಾಲಿ ಹಾಗೂ ಸಮಾವೇಶ ಹಮ್ಮಿಕೊಳ್ಳಲಾಯಿತು.
ರ್ಯಾಲಿಯಲ್ಲಿ ಆಗಮಿಸಿದ ಸಾವಿರಾರು ಮಂದಿ ಕಾರ್ಯಕರ್ತರು ಹಾಗೂ ಪ್ರಮುಖರು ಧರ್ಮಸ್ಥಳ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ
ಸಮಾವೇಶದಲ್ಲಿ ಭಾಗವಹಿಸಿದರು.ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಧರ್ಮಾಧಿಕಾರಿ ಡಿ. ವೀರೇಂದ್ರ ಸಮಾವೇಶದಲ್ಲಿ ಮಾತನಾಡಿದರು.
ಡಿ. ಸುರೇಂದ್ರ ಕುಮಾರ್, ಶಾಸಕರಾದ ಜಿ.ಡಿ. ಹರೀಶ್ ಗೌಡ ಹುಣಸೂರು, ಎ. ಮಂಜು ಅರಕಲಗೂಡು, ಸ್ವರೂಪ್ ಹಾಸನ, ಮಲ್ಲೇಶ್ ಬಾಬು ಕೋಲಾರ, ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಮುಖಂಡ ಕೆ. ಮಹಾದೇವ ಮೊದಲಾದವರು ಭಾಗವಹಿಸಿದ್ದರು.ಸಾವಿರಾರು ಮಂದಿಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.












