ಬೆಂಗಳೂರು:ಜೆಡಿಎಸ್ ಎನ್ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾಗುವ ವಿಷಯಕ್ಕೆ ಸಂಬಂಧಪಟ್ಟು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ನಾಯಕರನ್ನು ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್ಡಿಎ) ಜೆಡಿಎಸ್
ಸೇರ್ಪಡೆಯಾಗುವ ವಿಚಾರ, ಸೀಟು ಹಂಚಿಕೆ ಸಂಬಂಧಪಟ್ಟು ಚರ್ಚೆ ನಡೆಸಲಾಯಿತು ಎಂದು ನಾಯಕರು ಹೇಳಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ. ಜೆಡಿ(ಎಸ್) ಎನ್ಡಿಎ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ. ಕುಮಾರಸ್ವಾಮಿ ಅವರನ್ನು ತುಂಬು ಹೃದಯದಿಂದ ಎನ್ಡಿಎಗೆ ಸ್ವಾಗತಿಸುತ್ತೇವೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ ಸಂಬಂಧಪಟ್ಟು ಹಾಗೂ ಸೀಟ್ ಹಂಚಿಕೆ ವಿಚಾರದಲ್ಲಿ ಚರ್ಚೆ ನಡೆದಿದೆ. ಗೋವಾ ಸಿಎಂ ಪ್ರಮೋದ್ ಸಾವಂತ್, ನಿಖಿಲ್ ಕುಮಾರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.