ಬೆಂಗಳೂರು: ಜಾತ್ಯತೀತ ಜನತಾದಳದ ಪಂಚರತ್ನ ಯೋಜನೆ ನವೆಂಬರ್ 1 ರಂದು ಪ್ರಾರಂಭ ಆಗಲಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ರಥಯಾತ್ರೆಯನ್ನು ಆರಂಭ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.ರಾಷ್ಟ್ರೀಯ
.ಕಾರ್ಯಕಾರಿಣಿ ಸಭೆ ಎರಡು ದಿನಗಳ ಕಾಲ (ಅ.28-29) ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯಲಿದೆ. ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕವೂ ಸೇರಿ 13 ರಾಜ್ಯಗಳಿಂದ ಪದಾಧಿಕಾರಿಗಳು. ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಲಿದ್ದಾರೆ ಎಂದರು. ನವೆಂಬರ್ 1ರಂದೇ ಮುಂದಿನ ವಿಧಾನಸಭೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಾರ್ವಜನಿಕ ಸಮಾರಂಭದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಆವರು ಹೇಳಿದರು. ಒಟ್ಟು 35 ದಿನಗಳ ಕಾಲ ನಡೆಯುವ ಮೊದಲ ಹಂತದ ರಥ ಯಾತ್ರೆಯಲ್ಲಿ ಅನೇಕ ಹಳ್ಳಿ, ಪಟ್ಟಣಗಳನ್ನು ತಲುಪುತ್ತೇವೆ. ಉದ್ಯೋಗ, ಶಿಕ್ಷಣ, ನೀರಾವರಿ, ಕೃಷಿ, ಆರೋಗ್ಯ, ಮಹಿಳಾ ಮತ್ತು ಯುವಜನ ಸಬಲೀಕರಣ ಕುರಿತಂತೆ ರೂಪಿಸಿರುವ ಪಂಚರತ್ನ ಯೋಜನೆ ಇದಾಗಿದೆ ಎಂದು ಅವರು ಹೇಳಿದರು. ಜನವರಿ ತಿಂಗಳಲ್ಲಿ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಪೂಜೆ ನಡೆಸಿ ಆ ಭಾಗದಲ್ಲಿ ಪಂಚರತ್ನ ರಥಯಾತ್ರೆ ಆರಂಭ ಮಾಡಲಾಗುವುದು ಎಂದರು.