ಸುಳ್ಯ:ಕರ್ನಾಟಕ ಪ್ರದೇಶ ಜನತಾದಳ(ಜಾತ್ಯಾತೀತ) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಮಹಮ್ಮದ್ ಇಕ್ಬಾಲ್ ಎಲಿಮಲೆ ನೇಮಕಗೊಂಡಿದ್ದಾರೆ. ಕರ್ನಾಟಕ ಪ್ರದೇಶ ಜನತಾ ದಳ ಜಾತ್ಯಾತೀತ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಐ.ಕೆ. ಮಹಮ್ಮದ್ ಇಕ್ಬಾಲ್ ಎಲಿಮಲೆ ಅವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ
ಅಧ್ಯಕ್ಷರಾದ ಸಿಎಂ ಇಬ್ರಾಹಿಂ ರವರು ನೇಮಕ ಗೊಳಿಸಿರುತ್ತಾರೆ. ಇಕ್ಬಾಲ್ ಎಲೆಯವರು 2018ರಿಂದ ರಾಜ್ಯ ಜನತಾದಳದ ಕಾರ್ಯದರ್ಶಿಯಾಗಿದ್ದರು. ಇದೀಗ ರಾಜ್ಯ ಕಾರ್ಯದರ್ಶಿಯಾಗಿ ಮತ್ತೆ ನೇಮಕಗೊಂಡಿದ್ದಾರೆ. 2003 ರಿಂದ 2018ರವರೆಗೆ ರಾಜ್ಯ ಯುವ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ, ಸುಳ್ಯ ತಾಲೂಕು ಯುವ ಜನತಾದಳದ ಅಧ್ಯಕ್ಷರಾಗಿ, ಪಿ .ಎ. ಸಿ. ಬ್ಯಾಂಕ್ ಗುತ್ತಿಗಾರು ಇದರ ನಿರ್ದೇಶಕರಾಗಿ, ಟಿ.ಎ.ಪಿ.ಸಿ.ಎಂ.ಎಸ್. ಸುಳ್ಯ ತಾಲೂಕು ಜಮಿಯತುಲ್ ಫಲಹ ಅಧ್ಯಕ್ಷರಾಗಿ, ದೇವಚಳ್ಳ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ,ಎಲಿಮಲೆ ಜುಮಾ ಮಸೀದಿಯ ಅಧ್ಯಕ್ಷರಾಗಿ, ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾಗಿ, ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.