ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್ ವೆಂಕಟೇಶ್ ಅವರು ಚುನಾವಣಾ ಪ್ರಚಾರ ಕೈಗೊಂಡರು. ನಿಂತಿಕಲ್ಲು ಸೇರಿ ವಿವಿಧ ಕಡೆಗಳಲ್ಲಿ ಮತದಾರರನ್ನು ಭೇಟಿ ಮಾಡಿ
ಮಾತುಕತೆ ನಡೆಸಿ ಮತ ಯಾಚಿಸಿದರು. ಜೆಡಿಎಸ್ ಪ್ರಣಾಳಿಕೆಯ ಬಗ್ಗೆ ತಿಳಿಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ ಮತ್ತಿತರರು ಉಪಸ್ಥಿತರಿದ್ದರು