ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್ ವೆಂಕಟೇಶ್ ಅವರು ಜಾಲ್ಸೂರು, ಕನಕಮಜಲು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ವಿವಿಧ ಕಡೆಗಳಲ್ಲಿ ಮತದಾರರನ್ನು ಭೇಟಿ ಮಾಡಿ
ಮಾತುಕತೆ ನಡೆಸಿ ಮತ ಯಾಚಿಸಿದರು. ಜೆಡಿಎಸ್ ಪ್ರಣಾಳಿಕೆಯ ಬಗ್ಗೆ ತಿಳಿಸಿದರು. ಜೆಡಿಎಸ್ ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ ಮತ್ತಿತರರು ಉಪಸ್ಥಿತರಿದ್ದರು