ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್ ವೆಂಕಟೇಶ್ ಅವರು ಮೇ.3 ರಂದು ಸಂಪಾಜೆ, ಅರಂತೋಡು, ಕಲ್ಲುಗುಂಡಿ ಭಾಗದಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ವಿವಿಧ ಕಡೆಗಳಲ್ಲಿ ಮತದಾರರನ್ನು
ಭೇಟಿ ಮಾಡಿ ಮಾತುಕತೆ ನಡೆಸಿ ಮತ ಯಾಚಿಸಿದರು. ಜೆಡಿಎಸ್ ಪ್ರಣಾಳಿಕೆಯ ಬಗ್ಗೆ ತಿಳಿಸಿದರು. ಜೆಡಿಎಸ್ ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಅಬ್ದುಲ್ ಖಾದರ್ ಮೊಟ್ಟೆಂಗಾರ್, ಪಕ್ಷದ ಕಚೇರಿ ಕಾರ್ಯದರ್ಶಿ ಗೋಪಾಲ ಉಪಸ್ಥಿತರಿದ್ದರು. ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್.ವೆಂಕಟೇಶ್ ಹಾಗೂ ಜೆಡಿಎಸ್ ಮುಖಂಡರು ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.