ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್.ವೆಂಕಟೇಶ್ ಏ.19ರಂದು ನಾಮಪತ್ರ ಸಲ್ಲಿಸಿದರು. ನಗರದಲ್ಲಿ ಮೆರವಣಿಗೆಯಲ್ಲಿ ಸಾಗಿ ಬಂದು ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿನ ಚುನಾವಣಾಧಿಕಾರಿ ಕಚೇರಿಯಲ್ಲಿ ಕ್ಷೇತ್ರದ
ಚುನಾವಣಾಧಿಕಾರಿ ಅರುಣ್ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ.ಸದಾಶಿವ, ಜೆಡಿಎಸ್ ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಕಡಬ ತಾಲೂಕು ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್, ಅಗ್ರಹಾರ ದುಗ್ಗಪ್ಪ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಇಕ್ಬಾಲ್ ಎಲಿಮಲೆ, ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ ಉಪಸ್ಥಿತರಿದ್ದರು.