ಸುಳ್ಯ:ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ವತಿಯಿಂದ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿರುವ
ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕದ ಉದ್ಘಾಟನೆ ಹಾಗೂ ಜೇನು ಚಾಕೋಲೆಟ್ ಲೋಕಾರ್ಪಣಾ ಸಮಾರಂಭವು (ನಾಳೆ)ಮೇ.23 ರಂದು ಪೂ.10.30ಕ್ಕೆ ಸುಳ್ಯದ ಶಾಸ್ತ್ರೀ ವೃತ್ತದಲ್ಲಿರುವ ಅಮೃತ ಭವನದಲ್ಲಿ ನಡೆಯಲಿದೆ. ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ನೂತನ
ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಸಂಸ್ಕರಣಾ ಘಟಕವನ್ನು ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಜೇನು ಚಾಕಲೇಟ್ ಲೋಕಾರ್ಪಣೆ ಮಾಡಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ದೀಪ ಪ್ರಜ್ವಲನೆ ಮಾಡಲಿದ್ದಾರೆ.
ಶಾಸಕಿ ಭಾಗೀರಥಿ ಮುರುಳ್ಯ ನಾಮಫಲಕ ಅನಾವರಣ ಮಾಡಲಿದ್ದಾರೆ. ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಅಧ್ಯಕ್ಷ ಸಹಕಾರ ರತ್ನ ಚಂದ್ರ ಕೋಲ್ಚಾರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಾಫ ಉಪಸ್ಥಿತರಿರುವರು. ಅತ್ಯಾಧುನಿಕ ಸಂಸ್ಕರಣಾ ಘಟಕದ ಜೊತೆಗೆ ಉದ್ಘಾಟನೆ ಜೊತೆಗೆ ‘ಹನಿ ಚಾಕೋಲೇಟ್ ಬೈಟ್’ಬಿಡುಗಡೆ ಮಾಡಲಾಗುವುದು ಎಂದು
ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಅಧ್ಯಕ್ಷ ಸಹಕಾರ ರತ್ನ ಚಂದ್ರ ಕೋಲ್ಚಾರು ತಿಳಿಸಿದ್ದಾರೆ.