ಮಂಗಳೂರು:ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘದ
ಜೇನು ಉತ್ಪನ್ನಗಳ ಪ್ರಚಾರ ಮತ್ತು ಮಾರಾಟಕ್ಕೆ ಸಿದ್ಧಪಡಿಸಲಾದ ‘ಮಾರಾಟ ಮತ್ತು ಪ್ರದರ್ಶನ ವಾಹನ’ವನ್ನು ಸಹಕಾರ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಿದರು.73ನೇ ಅಖಿಲ ಭಾರತ ಸಹಕಾರ ಸಪ್ತಾಹದ
ಸಮಾರೋಪ ಸಮಾರಂಭದಲ್ಲಿ ನೂತನ ವಾಹನವನ್ನು ರಿಮೋಟ್ ಮೂಲಕ ಬಲೂನ್ ಒಡೆಯುವ ಮೂಲಕ ಸಚಿವರು ಉದ್ಘಾಟಿಸಿ ಶುಭ ಹಾರೈಸಿದರು. ಶಾಸಕರಾದ ಜಿ.ಟಿ. ದೇವೇಗೌಡ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಂಡಳದ ನಿರ್ದೇಶಕ ಶಶಿಕುಮಾರ್ ಬಾಲ್ಯೋಟ್ಟು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್.ಮನ್ಮಥ, ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಸಂಘದ ನಿರ್ದೇಶಕರು, ವಿವಿಧ ಗಣ್ಯರು ಹಾಗೂ ಜೇನು ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.













