ರಾಂಚಿ: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಜಾರ್ಖಂಡ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.
ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ತೊರೆದು ಇತ್ತೀಚೆಗಷ್ಟೇ ಪಕ್ಷ ಸೇರಿರುವ
ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್, ಶಾಸಕ ಬಾಬುಲಾಲ್ ಮರಂಡಿ, ಸೀತಾ ಸೊರೇನ್, ಗೀತಾ ಕೊಡಾ ಸೇರಿದಂತೆ ಒಟ್ಟು 66 ಮಂದಿ ಟಿಕೆಟ್ ಗಿಟ್ಟಿಸಿದ್ದಾರೆ.ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಜೆಎಂಎಂ ನೇತೃತ್ವದ ಮೈತ್ರಿ ಸರ್ಕಾರ ಸದ್ಯ ಜಾರ್ಖಂಡ್ನಲ್ಲಿ ಅಸ್ತಿತ್ವದಲ್ಲಿದೆ.
81 ಸದಸ್ಯ ಬಲದ ಇಲ್ಲನ ವಿಧಾನಸಭೆಗೆ ನವೆಂಬರ್ 13 ಹಾಗೂ 20ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿವೆ. ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.