ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಭಾರಿ ಕುತೂಹಲ ಕೆರಳಿಸಿದೆ. ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನಿಕಟ ಪೈಪೋಟಿ ಏರ್ಪಟ್ಟಿದೆ.90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್ ಸಂಖ್ಯೆ 46 ಆಗಿದೆ.ಆರಂಭಿಕ ಟ್ರೆಂಡ್ ಪ್ರಕಾರ
ಕಾಂಗ್ರೆಸ್ ಮುನ್ನಡೆಯಲ್ಲಿತ್ತು.ಆದರೆ ಕೆಲವೇ ಹೊತ್ತಿನಲ್ಲಿ ಟ್ರೆಂಡ್ ಬದಲಾಗಿದ್ದು, ಕಾಂಗ್ರೆಸ್ ಅನ್ನು ಹಿಂದಿಕ್ಕಿರುವ ಬಿಜೆಪಿ ಮುನ್ನಡೆ ಗಳಿಸಿದೆ.
ಚುನಾವಣಾ ಆಯೋಗದ ತಾಜಾ ಟ್ರೆಂಡ್ ಪ್ರಕಾರ ಬಿಜೆಪಿ 47, ಕಾಂಗ್ರೆಸ್ 36 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇದರೊಂದಿಗೆ ಬಿಜೆಪಿ ‘ಹ್ಯಾಟ್ರಿಕ್’ ಸಾಧನೆ ಮಾಡುವ ನಿರೀಕ್ಷೆ ಗರಿಗೆದರಿದೆ.
2019ರ ಚುನಾವಣೆಯಲ್ಲಿ ಬಿಜೆಪಿ 40 ಕ್ಷೇತ್ರಗಳಲ್ಲಿ ಗೆದ್ದು, ಜೆಜೆಪಿ ಮತ್ತು ಇತರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿತ್ತು.
ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಆಯೋಗದ ಈಗಿನ ಟ್ರೆಂಡ್ ಪ್ರಕಾರ ನ್ಯಾಷನಲ್ ಕಾನ್ಪರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿ ಮುನ್ನಡೆ ಸಾಧಿಸಿವೆ. ಎನ್ಸಿ 39, ಕಾಂಗ್ರೆಸ್ 8 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 28 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.ಇದೇ ರೀತಿಯ ಟ್ರೆಂಡ್ ಮುಂದುವರಿದರೆ ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಗಳಿವೆ.