ಸುಳ್ಯ:ಅಗಲಿದ ಹಿರಿಯ ಪತ್ರಕರ್ತ ಜೆ.ಕೆ.ರೈ ಅವರಿಗೆ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಸಭೆ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.ನುಡಿನಮನ ಸಲ್ಲಿಸಿದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ ಸುಳ್ಯದ ಪತ್ರಕರ್ತರ ಸಂಘದ ಬೆಳವಣಿಗೆಗೆ ಮತ್ತು
ಪ್ರೆಸ್ ಕ್ಲಬ್ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಜೆ.ಕೆ.ರೈ ಅವರು ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ನಿರಂತರ ಕೆಲಸದ ಒತ್ತಡದಿಂದ ಪತ್ರಕರ್ತರ ಆರೋಗ್ಯದ ಮೇಲೆ ಪರಿಣಾಮ ಬೀರುತಿದೆ, ಆದುದರಿಂದ ಪತ್ರಕರ್ತರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಹೇಳಿದರು.
ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿ ನುಡಿ ನಮನ ಸಲ್ಲಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎನ್.ಪುಷ್ಪರಾಜ್, ಪ್ರೆಸ್ ಕ್ಲಬ್ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ,ಜಿಲ್ಲಾ ಸಮಿತಿ ಸದಸ್ಯ ಗಿರೀಶ್ ಅಡ್ಪಂಗಾಯ, ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ಭಾಸ್ಕರ ರೈ ಕಟ್ಟ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪತ್ರಕರ್ತರಾದ ಗಂಗಾಧರ ಮಟ್ಟಿ, ಜಯಪ್ರಕಾಶ್ ಕುಕ್ಕೇಟ್ಟಿ, ದುರ್ಗಾಕುಮಾರ್ ನಾಯರ್ಕೆರೆ, ಗಂಗಾಧರ ಕಲ್ಲಪಳ್ಳಿ, ಕೃಷ್ಣ ಬೆಟ್ಟ, ಶಿವಪ್ರಸಾದ್ ಆಲೆಟ್ಟಿ ನುಡಿನಮನ ಸಲ್ಲಿಸಿದರು. ಪ್ರೆಸ್ ಕ್ಲಬ್ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.









