ಸುಳ್ಯ: ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಜ್ಞಾನಾಮೃತ ಸಭಾಭವನ ಉದ್ಘಾಟನಾ ಕಾರ್ಯಕ್ರಮವು ಶುಕ್ರವಾರ ನಡೆಯಿತು. ನೂತನ ಜ್ಞಾನಾಮೃತ ಸಭಾಭವನವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನವನ್ನು ಸಂಸ್ಥೆಗೆ
ಮುಂದಿನ ದಿನಗಳಲ್ಲಿ ನೀಡುವ ಬಗ್ಗೆ ಭರವಸೆ ನೀಡಿದರು,ಪದವಿಪೂರ್ವ ಕಾಲೇಜು ಇದೀಗ ಕೆಪಿಎಸ್ಸಿ ಆಗಿ ಪದನ್ನೊತಿ ಹೊಂದಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಯಶಸ್ಸನ್ನು ಕಾಣಲಿ ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಅಮೃತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಬಿ ಸದಾಶಿವ,ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ ಮುಸ್ತಫ ಶುಭ ಹಾರೈಸಿದರು. ಪಟ್ಟಣ ಪಂಚಾಯತ್ ಮಾಜಿ
ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಮಾಜಿ ಸದಸ್ಯ ಧೀರಾ ಕ್ರಾಸ್ತಾ, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಲಿಂಗಪ್ಪಗೌಡ ಕೇರ್ಪಳ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮಂಜುಳಾ ಬಡಿಗೇರ್, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಡಾ.ರಂಗಯ್ಯ, ಅಮೃತ ಮಹೋತ್ಸವ ಸಮಿತಿಯ ಕೋಶಾಧಿಕಾರಿ ಅಶೋಕ್ ಪ್ರಭು, ಕಾಲೇಜಿನ ಹಿರಿಯ ಉಪನ್ಯಾಸಕ ಕೃಷ್ಣ ಉಪಸ್ಥಿತರಿದ್ದರು. ಪ್ರಾಂಶುಪಾಲ ಮೋಹನ ಗೌಡ ಬೊಮ್ಮಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ವಂದಿಸಿ, ಉಪನ್ಯಾಸಕಿ ಸತ್ಯವತಿ ಎಸ್ ಕಾರ್ಯಕ್ರಮ ನಿರೂಪಿಸಿದರು.












