ಸುಳ್ಯ:ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಸುಳ್ಯದ ಹಿರಿಯ ಪತ್ರಕರ್ತ ಜೆ.ಕೆ.ರೈ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಬಿ.ಎನ್.ಪುಷ್ಪರಾಜ್ ಅವರ ನೇತೃತ್ವದಲ್ಲಿ ಪತ್ರಕರ್ತರ ತಂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಚಿಕಿತ್ಸಾ ನೆರವನ್ನು ಹಸ್ತಾಂತರಿಸಲಾಯಿತು.
ಹಿರಿಯ ಪತ್ರಕರ್ತ ಜೆ ಕೆ ರೈ ಅವರು ಅನಾರೋಗ್ಯದಿಂದ ಬಳಲುತ್ತಿರುವ
ವಿಷಯ ತಿಳಿದು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ ಅವರು ಆರ್ಥಿಕ ನೆರವು ನೀಡಿದ್ದು ಈ ನೆರವಿನ ಮೊತ್ತವನ್ನು ಹಸ್ತಾಂತರ ಮಾಡಲಾಯಿತು. ಜೆ ಕೆ ರೈ ಅವರು ಓರ್ವ ಕ್ರಿಯಾಶೀಲ ಪತ್ರಕರ್ತ,ಸುಳ್ಯ ಪ್ರೆಸ್ ಕ್ಲಬ್ ಹಾಗೂ ಪತ್ರಕರ್ತರ ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದಾರೆ. ಈಗಾಗಲೇ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ನಮ್ಮ ಮನವಿಗೆ ಸ್ಪಂದಿಸಿ ಸಹಾಯ ಹಸ್ತ ನೀಡಿದ್ದಾರೆ. ಸಂಘದ

ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರೊಂದಿಗೆ ಮಾತನಾಡಿ ರಾಜ್ಯ ಸಂಘ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದಲೂ ಆರ್ಥಿಕ ನೆರವು ಪಡೆಯಲು ಪ್ರಯತ್ನಿಸುವುದಾಗಿ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ ಎನ್, ಮಾಜಿ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಸುಳ್ಯ ತಾಲೂಕು ಪತ್ರಕರ್ತರ ಸಂಫದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಜಯಲಕ್ಷ್ಮಿ, ಜೆ.ಕೆ.ರೈ ಉಪಸ್ಥಿತರಿದ್ದರು.












