ಸುಳ್ಯ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಸುಳ್ಯಕ್ಕೆ ಆಗಮಿಸಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ ಬೆನ್ನಲ್ಲೇ ಇದೀಗ ಬಿಜಪಿ ರಾಷ್ಟ್ರೀಯ ಅಧ್ಯಕ್ಷರು ಸುಳ್ಯಕ್ಕೆ ಆಗಮಿಸಲಿದ್ದಾರೆ. ಏ.30 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸುಳ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸುಳ್ಯದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೆಪಿ ನಡ್ಡಾ ಸುಳ್ಯಕ್ಕೆ ಆಗಮಿಸುವುದನ್ನು ಬಿಜೆಪಿ ಮುಖಂಡರು ಖಚಿತ ಪಡಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post