ಸುಳ್ಯ: ಹಿರಿಯ ಕಾಂಗ್ರೆಸ್ ಮುಖಂಡ ಎನ್.ಜಯಪ್ರಕಾಶ್ ರೈ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿರುವ ಎನ್.ಜಯಪ್ರಕಾಶ್ ರೈಯವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ, ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಈ ಮೂಲಕ
ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಅವರು ಘೋಷಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ಮುಂದೆ ಯಾವುದೇ ರಾಜಕೀಯ ಪಕ್ಷದಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಇಲ್ಲ. ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ. ಸಾಮಾಜಿಕ, ಕ್ರೀಡೆ, ಧಾರ್ಮಿಕ ಕ್ಷೇತ್ರದಲ್ಲಿ ಮುಂದುವರಿಯಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ರೈ ಅವರು ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ, ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಹಾಗೂ ಅಧ್ಯಕ್ಷತೆ ಅವರ ಹೆಸರು ಸಕ್ರೀಯವಾಗಿ ಕೇಳಿ ಬಂದಿದ್ದರೂ ಕೊನೆಯ ಕ್ಷಣದಲ್ಲಿ ಅವರನ್ನು ಪಟ್ಟಿಯಿಂದ ಕೈ ಬಿಡಲಾಗಿತ್ತು.















