ಸುಳ್ಯ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಚುನಾವಣಾ ಪ್ರಚಾರಕ್ಕಾಗಿ ಸುಳ್ಯಕ್ಕೆ ಆಗಮಿಸಲಿದ್ದು ರಾಷ್ಟ್ರೀಯ ಅಧ್ಯಕ್ಷರ ಆಗಮನಕ್ಕೆ ಕ್ಚಣ ಗಣನೆ ಆರಂಭಗೊಂಡಿದೆ. ಕಾರ್ಯಕರ್ತರು ಮುಖಂಡರು ಕಾತರದಿಂದ ಕಾಯುತ್ತಿದ್ದಾರೆ. ಕುಂದಾಪುರದಿಂದ ಚುನಾವಣಾ ಪ್ರಚಾರ
ಮುಗಿಸಿ ಹೆಲಿಕಾಪ್ಟರ್ ಮೂಲಕ ಸುಳ್ಯಕ್ಕೆ ಆಗಮಿಸುವ ಅವರು ಕೊಡಿಯಾಲಬೈಲಿನ ಹೆಲಿಪ್ಯಾಡ್ನಲ್ಲಿ ಇಳಿದು ಅಲ್ಲಿಂದ ಅವರು ಪ್ರವೀಣ್ ನೆಟ್ಟಾರು ಅವರ ಮನೆಗೆ ತೆರಳಲಿದ್ದಾರೆ. ಬಳಿಕ ಚೆನ್ನಕೇಶವ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಜೆಪಿ ನಡ್ಡಾ ಸ್ವಾಗತಿಸಲು ಹೆಲಿಪ್ಯಾಡ್ನಲ್ಲಿ ಮುಖಂಡರು ಸಿದ್ಧತೆ ನಡೆಸಿದ್ದಾರೆ.