ಸುಳ್ಯ: ಏ.30 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸುಳ್ಯಕ್ಕೆ ಆಗಮಿಸಲಿದ್ದಾರೆ. 30 ರಂದು ಸಂಜೆ 4.30ಕ್ಕೆ ಅವರು ಸುಳ್ಯದಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಲಿದ್ದಾರೆ. ಕಳೆದ ವರ್ಷ ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೂ
ಜೆಪಿ ನಡ್ಡಾ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದ್ದಾರೆ. ಪ್ರವೀಣ್ ನೆಟ್ಟಾರು ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನಿರ್ಮಿಸಲಾದ ನೂತನ ಮನೆಯ ಗೃಹ ಪ್ರವೇಶ ಏ.27 ರಂದು ನಡೆದಿತ್ತು. ಈ ಹಿನ್ನಲೆಯಲ್ಲಿ ನಡ್ಡಾ ಅವರು ಭೇಟಿ ನೀಡುತ್ತಾರೆ ಎಂದು ಹೇಳಲಾಗಿದೆ. ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ಬೃಹತ್ ಸಾರ್ವವಜನಿಕ ಸಭೆ ನಡೆಯಲಿದೆ.ಸಭೆಗೆ ಸಿದ್ಧತೆಗಳು ಆರಂಭಗೊಂಡಿದೆ. ಸುಮಾರು ಹತ್ತು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಕ್ಷದ ಅಭಿಮಾನಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾಷ್ಟ್ರ ಹಾಗು ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ
ಎಂದು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ತಿಳಿಸಿದ್ದಾರೆ.