ಸುಳ್ಯ:ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಅಮೃತ ಮಹೋತ್ಸವ ಆಚರಣೆ ಡಿ.27 ರಿಂದ ಡಿ.29ರ ವರೆಗೆ ಅದ್ದೂರಿಯಾಗಿ ನಡೆಯಲಿದ್ದು ಸಿದ್ಧತೆಗಳು ಭರದಿಂದ ಸಾಗಿದೆ ಎಂದು ಕಾಲೇಜಿನ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ.
ಅವರು ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜು ಅಮೃತ ಮಹೋತ್ಸವ ಸಮಿತಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ವಿವಿಧ
ಅಭಿವೃದ್ಧಿ ಯೋಜನೆಗಳ ನಿರ್ಮಾಣ, ವೈವಿಧ್ಯಮಯ ವಸ್ತುಪ್ರದರ್ಶನ, ಶೈಕ್ಷಣಿಕ ವಸ್ತು ಪ್ರದರ್ಶನ, ಸಭಾ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ 3 ದಿನಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ಡಿ.27ರಂದು ಪೂರ್ವಾಹ್ನ 10ಕ್ಕೆ ವಸ್ತು ಪ್ರದರ್ಶನವನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ಕೆ.ವಿ ರೇಣುಕಾಪ್ರಸಾದ್ ಉದ್ಘಾಟಿಸಲಿದ್ದಾರೆ. ಬಳಿಕ ಸುಮಾರು 13 ಲಕ್ಷದಲ್ಲಿ ನಿರ್ಮಿಸಿದ ನೂತನ ಭೋಜನಾಲಯದ ಉದ್ಘಾಟನೆಯನ್ನು ದಾನಿಗಳಾದ ಕೃಷ್ಣ ನಾವಡ ನೆರವೇರಿಸುವರು. ಪೂ.10.30ಕ್ಕೆವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಸ್ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ

ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ , ವಿಧಾನ ಪರಿಷತ್ ಶಾಸಕರಾದ ಎಸ್ ಎಲ್ ಭೋಜೇ ಗೌಡ , ವಿಶೇಷ ಆಹ್ವಾನಿತರಾಗಿ ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ , ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ , ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ದ.ಕ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ , ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ಕೆ.ಎಸ್.ಇ.ಎ.ಬಿ ಕಾರ್ಯದರ್ಶಿ ಮಲ್ಲೇಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ರಾಜೇಶ್ವರಿ ಹೆಚ್ .ಹೆಚ್ , ಸುಳ್ಯ ತಾಹಶೀಲ್ದಾರ್ ಮಂಜುಳ ಎಂ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ , ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ,ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ಉಪಸ್ಥಿತರಿರುವರು. ಬಳಿಕ ಅಪರಾಹ್ನ 2 ರಿಂದ ಸಾಂಸ್ಕೃತಿಕ ವೈವಿಧ್ಯ ಹಾಗೂ ಸಂಜೆ 6 ಗಂಟೆಯಿಂದ ಕಲಾಮಯಂ ಉಡುಪಿ ತಂಡದಿಂದ ಜಾನಪದ ನಾಟ್ಯ ವೈಭವ ನಡೆಯಲಿದೆ.
ಡಿ.28ರಂದು ಗುರು ವಂದನಾ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಎಸ್ ಅಂಗಾರ ಮಹಿಸಲಿದ್ದಾರೆ. ಶಾಲೆ ಮತ್ತು ಕಾಲೇಜಿನಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ 125 ಜನರಿಗೆ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಗೌರವಿಸಲಿದ್ದಾರೆ. ಸಭಾ ವೇದಿಕೆಯಲ್ಲಿ ಪದ್ಮಶ್ರೀ ಗಿರೀಶ್ ಭಾರಧ್ವಜ್, ಚಿದಾನಂದ ಗೌಡ ಕೊಳಂಬೆ, ಸುಂದರ ನಾಯ್ಕ್ ಉಪಸ್ಥಿತಿತರಿರಲಿದ್ದಾರೆ. ಅಪರಾಹ್ನ 2ರಿಂದ ಸಾಂಸ್ಕೃತಿಕ ವೈವಿಧ್ಯ,6.30ರಿಂದ ಯಕ್ಷಗಾನ ಬಯಲಾಟ ನಡೆಯಲಿದೆ.

ಡಿ.29ರಂದು ಪೂ.10ರಿಂದ ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರು ದಾನ ರೂಪದಲ್ಲಿ ನೀಡುವ ರೂ.1ಕೋಟಿ ವೆಚ್ಚದ ತರಗತಿ ಕೋಣೆ ಸಮುಚ್ಚಯದ ಶಂಕುಸ್ಥಾಪನೆ ನಡೆಯಲಿದೆ.ಪೂ.10.30ರಿಂದ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ.ಕೆ.ವಿ ಚಿದಾನಂದ ವಹಿಸಲಿದ್ದಾರೆ. ವಾಗ್ಮಿ ಎನ್.ಆರ್.ದಾಮೋದರ ಶರ್ಮ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರೀನ್ ಹೀರೋ ಆಪ್ ಇಂಡಿಯಾ ಡಾ.ಆರ್.ಕೆ ನಾಯರ್, ಒಸಾಟ್ ಸಂಸ್ಥೆಯ ಸ್ಥಾಪಕ ವಾದಿರಾಜ ಭಟ್, ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಸಿಪ್ರಿಯನ್ ಮಂತೆರೋ , ಉಪನಿರ್ದೇಶಕರಾದ ಜಿ.ಎಸ್ ಶಶಿಧರ, ಡಯಟ್ ಪದನಿಮಿತ್ತ ನಿರ್ದೇಶಕ ಸದಾನಂದ ಪೂಂಜ ಉಪಸ್ಥಿತರಿರುವರು. ಮಧ್ಯಾಹ್ನ 1.30ರಿಂದ ಫ್ರೌಢ ಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ಸಂಜೆ 6.30ರಿಂದ ಅರೆಭಾಷೆ ನಾಟಕ ಅಪ್ಪ ಪ್ರದರ್ಶನಗೊಳ್ಳಲಿದೆ ಎಂದು ಸೀತಾರಾಮ ರೈ ವಿವರಿಸಿದರು.
ಕಾರ್ಯಕ್ರಮದ ಅಂಗವಾಗಿ ವಸ್ತು ಪ್ರದರ್ಶನ, ಶೈಕ್ಷಣಿಕ ವಸ್ತು ಪ್ರದರ್ಶನ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯಲಿದೆ.
1.05 ಕೋಟಿ ರೂಗಳ ಕಾಮಗಾರಿ.
ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಕಾಲೇಜು ಆವರಣದಲ್ಲಿ ಸುಮಾರು 1.05 ಕೋಟಿ ರೂಗಳ ಕಾಮಗಾರಿ ನಡೆಸಲಾಗಿದ್ದು ತರಗತಿ ಕೋಣೆ , ಫ್ರೌಢ ಶಾಲೆ ಪಾಕಶಾಲೆ , ಕಾಲೇಜು ವಿಭಾಗದ ಅಡುಗೆ ಕೋಣೆ , ಫ್ರೌಢ ಮತ್ತು ಕಾಲೇಜು ದಾಸ್ತಾನು ಕೊಠಡಿ, ಭೋಜನಾಲಯ , ಮೈದಾನದ ತಡೆಗೋಡೆ, ಪ್ರೇಕ್ಷಕರ ಸ್ಟಾಂಡ್ , ಪ್ರೇಕ್ಷಕರ ಗ್ಯಾಲರಿ, ಒಳಾಂಗಣ ಇಂಟರ್ ಲಾಕ್ , ಸುಣ್ಣ ಬಣ್ಣ ಸೇರಿದಂತೆ ನಾನಾ ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಸೀತಾರಾಮ ರೈ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಅಮೃತ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಬಿ ಸದಾಶಿವ, ಕೋಶಾಧಿಕಾರಿ ಅಶೋಕ ಪ್ರಭು, ಸಂಘಟನಾ ಕಾರ್ಯದರ್ಶಿ ಮುಸ್ತಫಾ ಕೆ.ಎಂ , ಹಿರಿಯ ವಿಧ್ಯಾರ್ಥಿಗಳ ಸಂಘದ ಅಧ್ಯಕ್ಷ ಪಿ.ಬಿ ಸುಧಾಕರ ರೈ, ಕಾರ್ಯಾಧ್ಯಕ್ಷ ಲಿಂಗಪ್ಪ ಗೌಡ ಕೇರ್ಪಳ, ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಅಧ್ಯಕ್ಷೆ ಮಂಜುಳಾ ಬಡಿಗೇರ್ , ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ , ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಪಿ , ಜೊತೆ ಕೋಶಾಧಿಕಾರಿ ರಾಮಚಂದ್ರ ಪಲ್ಲತ್ತಡ್ಕ ,ಡಾ.ರಂಗಯ್ಯ, ಎನ್.ಜಯಪ್ರಕಾಶ್ ರೈ, ಕೆ.ಗೋಕುಲ್ದಾಸ್, ಚಂದ್ರಶೇಖರ ಪೇರಾಲು, ಡಾ.ಎನ್.ಎ.ಜ್ಞಾನೇಶ್, ಬೆಳ್ಯಪ್ಪ ಗೌಡ ಸೇರಿದಂತೆ ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.













