ನವದೆಹಲಿ: ಕನ್ನಡಿಗ ಕೆ.ಎಲ್.ರಾಹುಲ್ ಸಿಡಿಸಿದ ಸ್ಫೋಟಕ ಶತಕದ ನೆರವಿನಿಂದ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬೃಹತ್ ಮೊತ್ತ ಪೇರಿಸಿದೆ. ಮೊದಲು ಬ್ಯಾಟ್ ಮಾಡಿದ ಡೆಲ್ಲಿ 20 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿದೆ. ಸ್ಟಾರ್ ಬ್ಯಾಟರ್ ಕೆ.ಎಲ್ ರಾಹುಲ್ ಸ್ಪೋಟಕ ಶತಕ ಸಿಡಿಸಿದರು.ಕೇವಲ
67 ಎಸೆತಗಳಲ್ಲಿ16 ಬೌಂಡರಿ ಹಾಗೂ 9 ಸಿಕ್ಸರ್ ನೆರವಿನಿಂದ ಅಜೇಯ 152 ರನ್ ಸಿಡಿಸಿ ಹೊಸ ಮೈಲುಗಲ್ಲು ಸ್ಥಾಪಿಸಿದರು. ನಿತೀಶ್ ರಾಣಾ
44 ಎಸೆತಗಳಲ್ಲಿ 11 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 91 ರನ್ ಸಿಡಿಸಿದರು.
ರಾಹುಲ್ ಆರಂಭದಿಂದಲೇ ಪಂಜಾಬ್ ಬೌಲರ್ಗಳ ಮೇಲೆ ಸವಾರಿ ಮಾಡಿದರು. ಸರಣಿ ಬೌಂಡರಿ ಹಾಗೂ ಸಿಕ್ಸರ್ಗಳನ್ನು ಬಾರಿಸುವ ಮೂಲಕ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿದರು.ಅದ್ಭುತ ಫಾರ್ಮ್ನಲ್ಲಿರುವ ರಾಹುಲ್ 47 ಬಾಲ್ಗಳಲ್ಲಿ ಶತಕದ ಗಡಿ ದಾಟಿದರು.ಆ ಮೂಲಕ
ಟೂರ್ನಿಯ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ 3ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮುನ್ನ ಕ್ರಿಸ್ ಗೇಲ್ 175, ಬ್ರೆಂಡನ್ ಮೆಕ್ಕಲಮ್ 158 ರನ್ ಬಾರಿಸಿದ್ದರು.
ನಿತೀಶ್ ರಾಣಾ ಅವರೊಂದಿಗೆ ಎರಡನೇ ವಿಕೆಟ್ಗೆ 220 ರನ್ಗಳ ಅದ್ಭುತ ಜೊತೆಯಾಟವಾಡಿದ ರಾಹುಲ್, ತಂಡವು ಬೃಹತ್ ಮೊತ್ತ ಪೇರಿಸಲು ಬುನಾದಿ ಹಾಕಿಕೊಟ್ಟರು.ಪಂಜಾಬ್ ಕಿಂಗ್ಸ್ ತಂಡದ ಫೀಲ್ಡಿಂಗ್ ವೈಫಲ್ಯದ ಲಾಭವನ್ನು ಸರಿಯಾಗಿ ಬಳಸಿಕೊಂಡ ರಾಹುಲ್, ತಮಗೆ ಸಿಕ್ಕ ಜೀವದಾನವನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು.












