ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಖ್ಯಾತ ಕ್ರಿಕೆಟ್ ತಾರೆ, ಟೀಂ ಇಂಡಿಯಾದ ಆಟಗಾರ ಕೆ.ಎಲ್.ರಾಹುಲ್ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಸಾದ
ಸ್ವೀಕರಿಸಿದರು.ಶ್ರೀ ದೇವಳದ ಅರ್ಚಕರು ಅವರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು.ಬಳಿಕ ಅವರು ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ಬಳಿಕ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು.
ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಎಸ್ ಸ್ವಾಗತಿಸಿದರು. ಕುಕ್ಕೆ ಸುಬ್ರಹ್ಮಣ್ಯನ ಅನನ್ಯ ಭಕ್ತರಾದ ಇವರು ಪ್ರತಿವರ್ಷ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರುಶನ ಪಡೆಯುತ್ತಾರೆ.