ಪುತ್ತೂರು:ಈ ಬಾರಿ ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ.ಡಬಲ್ ಡಿಜಿಟ್ ಸಂಖ್ಯೆಯ ಬಿಜೆಪಿ ಶಾಸಕರು ವಿಧಾನಸಭೆ ಪ್ರವೇಶಿಸಲಿದ್ದಾರೆ ಎಂದು ಕೇರಳ ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಸುರೇಂದ್ರನ್ ಹೇಳಿದರು. ಪುತ್ತೂರಿಗೆ
ಭೇಟಿ ನೀಡಿದ ಅವರು ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮುಖಂಡರನ್ನು ಭೇಟಿ ಮಾಡಿ ಸುದ್ದಿಗಾರರ ಜೊತೆ ಮಾತನಾಡಿದರು. ಕಾಸರಗೋಡು ಜಿಲ್ಲೆಯಲ್ಲಿ ಮಂಜೇಶ್ವರ ಮತ್ತು ಕಾಸರಗೋಡು ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ಇದೆ. 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ
ಶೇ.20 ಮತ ಪಡೆದು ಒಬ್ಬರು ಎಂಪಿಯನ್ನು ಗೆಲ್ಲಿಸಲು ಸಾಧ್ಯವಾಗಿದೆ.ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಮತ ಪಡೆದು ಹೆಚ್ಚು ಸ್ಥಾನ ಪಡೆಯಲಿದ್ದೇವೆ ಎಂದು ಸುರೇಂದ್ರನ್ ಹೇಳಿದರು. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಸುರೇಂದ್ರನ್ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡೆನ್ನು ಭೇಟಿ ಮಾಡಿದರು.












