ಸುಳ್ಯ:ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ ಸುಳ್ಯ ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರೀಯ ಅಮೆಚೂರ್ ಕಬಡ್ಡಿ ಫೆಡರೇಷನ್ ಮತ್ತು ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಚಾಂಪಿಯನ್ಶಿಪ್ 2023 ನ.17ರಿಂದ 19ರ ತನಕ

ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯ ಪ್ರಭು ಮೈದಾನದಲ್ಲಿ ನಡೆಯಲಿದೆ. ಕಬಡ್ಡಿ ಪಂದ್ಯಾಟ ನಡೆಯುವ ಕ್ರೀಡಾಂಗಣಕ್ಜೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು. ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ ಶಾಸಕರು ಸಂಘಟನಾ ಸಮಿತಿಯ ಪದಾಧಿಕಾರಿಗಳ ಜೊತೆ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್.ಎನ್.ಮನ್ಮಥ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ,
ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಅಧ್ಯಕ್ಷ ಸಂಶುದ್ದೀನ್ ಜಿ.ಪಿ. ಭಾರತ್ ಶಾಮಿಯಾನ, ಕಾರ್ಯದರ್ಶಿ ಗುರುದತ್ ನಾಯಕ್, ಉಪಾಧ್ಯಕ್ಷ ಶಾಫಿ ಪ್ರಗತಿ, ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಶಿವಪ್ರಕಾಶ್, ಖಜಾಂಜಿ ಜಿ.ಎ.ಮಹಮ್ಮದ್, ಹರೀಶ್ ಉಬರಡ್ಕ, ಸುನಿಲ್, ಮಧುಸೂಧನ ಉಬರಡ್ಕ ಮತ್ತಿತರರು ಉಪಸ್ಥಿತರಿದ್ದರು.









