ಸುಳ್ಯ:ಗುತ್ತಿಗಾರಿನ ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಬಾಲಕಿಯರ ವಿಭಾಗದಲ್ಲಿ ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ತೃತೀಯ ಸ್ಥಾನ ಪಡೆದುಕೊಂಡಿದೆ. ಮುಕ್ತ ಮ್ಯಾಚ್ ಕಬಡ್ಡಿ ಪಂದ್ಯಾಟದಲ್ಲಿ ಪಿಯುಸಿ ಮಹಿಳಾ ವಿಭಾಗದಲ್ಲಿ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ತೃತೀಯ ಸ್ಥಾನದೊಂದಿಗೆ ಫಲಕ ಹಾಗೂ ನಗದು ಪಡೆದುಕೊಂಡಿತು.ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಣ ಉಪನ್ಯಾಸಕರಾದ ಬಾಲಚಂದ್ರ ರವರು ತರಬೇತಿ ನೀಡಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post