ಸುಳ್ಯ: ಸುಳ್ಯದಲ್ಲಿ ನ.17 ರಿಂದ 19ರ ತನಕ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ ನಡೆಯಲಿದ್ದು ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿದೆ. ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಉಪಾದ್ಯಕ್ಷ ಎಸ್.ಸಂಶುದ್ದೀನ್ ನೇತೃತ್ವದ ತಂಡ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಂಘಟನಾ ಸಮಿಯ ಸದಸ್ಯರೊಡನೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು
ವಾಲಿಬಾಲ್ ಅಸೋಸಿಯೇಶನ್ ಕೋಶಾಧಿಕಾರಿ ಕೆ.ಬಿ.ಇಬ್ರಾಹಿಂ ಸಂಘಟನಾ ಸಮಿತಿಯ ಉಪಾದ್ಯಕ್ಷ ಶಾಫಿ ಪ್ರಗತಿ, ಸಂಘಟನಾ ಕಾರ್ಯದರ್ಶಿ ಶರತ್ ಎಣ್ಮೂರು, ಕೋಶಾದಿಕಾರಿ ಜಿ.ಎ ಮಹಮ್ಮದ್ ಸಹನಾ ಉಪಸ್ತಿತರಿದ್ದರು. ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಅಮೆಚೂರ್ ಕಬಡ್ಡಿ ಫೆಡರಷನ್, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರದಲ್ಲಿ ಚೆನ್ನಕೇಶವ ದೇವಸ್ಥಾನದ ಬಳಿಯ ಪ್ರಭು ಮೈದಾನದಲ್ಲಿ ನವಂಬರ್ ತಿಂಗಳ 17,18,19 ರಂದು ನಡೆಯಲಿರುವ ರಾಷ್ಟ್ರೀಯ ಮಟ್ಟದ ಪುರುಷರ ಹಾಗೂ ಮಹಿಳಾ ವಿಭಾಗದ ಪ್ರೊ ಮಾದರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ ನಡೆಯಲಿದೆ.









