ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ಎಸ್ಪಿಯು ಕಾಲೇಜಿನ ಆಶ್ರಯದಲ್ಲಿ ಬುಧವಾರ ಕಾಲೇಜಿನ ಕ್ರೀಡಾಂಗಣದಲ್ಲಿ ಕಡಬ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ
ಸದಸ್ಯ ಶ್ರೀವತ್ಸ ಬೆಂಗಳೂರು ಉದ್ಘಾಟಿಸಿದರು.
ಎಸ್ಎಸ್ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ರೆಫ್ರಿ ಅಸೋಸಿಯೇಶನ್ನ ಅಧ್ಯಕ್ಷ ಶಿವರಾಮ ಯೇನೆಕಲ್ಲು, ಕೋಣಾಲು ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಶಿವರಾಮ್ ಮುಖ್ಯ ಅತಿಥಿಗಳಾಗಿದ್ದರು. ಎಸ್ಎಸ್ಪಿಯು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಮಾವಿನಕಟ್ಟೆ, ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ವಿದ್ಯಾರ್ಥಿ ಸಂಘದ ಸಂಚಾಲಕ ಜಯಪ್ರಕಾಶ್.ಆರ್ ವೇದಿಕೆಯಲ್ಲಿದ್ದರು.
ಉಪನ್ಯಾಸಕಿ ಶ್ಯಾಮಿಲಿ ಸ್ವಾಗತಿಸಿದರು.ಇತಿಹಾಸ ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ ವಂದಿಸಿದರು. ಉಪನ್ಯಾಸಕಿ ಶ್ರುತಿ ಯಾಲದಾಳು ಕಾರ್ಯಕ್ರಮ ನಿರೂಪಿಸಿದರು.ಪಂದ್ಯಾಟದಲ್ಲಿ ಒಟ್ಟು 8 ತಂಡಗಳು ಚಾಂಪಿನ್ಷಿಪ್ಗಾಗಿ ಸೆಣಸಾಡಿದವು.









