ಐವರ್ನಾಡು:ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗುತಿರುವ ಕಬಡ್ಡಿ ಯುವಕರಿಗೆ ಪ್ರೇರಣೆ, ಶಿಸ್ತು ಮತ್ತು ಕ್ರೀಡಾಸ್ಪೂರ್ತಿಯ ಪ್ರತೀಕ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಎರಡು
ದಿನಗಳ ಕಾಲ ನಡೆಯುವ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ರಾಜಕೀಯದವರಿಗೂ ಅಚ್ಚುಮೆಚ್ಚಿನ ಆಟ ಕಬಡ್ಡಿ. ಕಬಡ್ಡಿ ಆಟದಲ್ಲಿ ಕಾಲೆಳೆಯುವ ಪ್ರವೃತ್ತಿ ಹೆಚ್ಚು. ರಾಜಕೀಯದಲ್ಲಿಯೂ ಪರಸ್ಪರ ಕಾಲೆಳೆಯುವ ಪ್ರವೃತ್ತಿ ಇದ್ದೇ ಇದೆ. ಆದುದರಿಂದ ಉತ್ತಮ ಕಬಡ್ಡಿ ಆಟಗಾರರು ರಾಜಕೀಯ ಕ್ಷೇತ್ರದಲ್ಲಿಯೂ ಮಿಂಚಬಹುದು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಐವರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುತಿರುವ ಪಂದ್ಯಕೂಟವನ್ನು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಉದ್ಘಾಟಿಸಿದರು.
ಐವರ್ನಾಡು ಗೆಳೆಯರ ಬಳಗದ ಗೌರವಾಧ್ಯಕ್ಷ ಎಸ್.ಎನ್.ಮನ್ಮಥ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಬಡ್ಡಿ ಅಸೋಸಿಯೇಷನ್ನ ಚೇರ್ಮೆನ್ ರಾಕೇಶ್ ಮಲ್ಲಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಅರಂತೋಡು ಪಾಪ್ಯುಲರ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಪಿ.ಬಿ.ದಿವಾಕರ ರೈ,ಎಪಿಎಂಸಿ ಮಾಜಿ ಅಧ್ಯಕ್ಷ ಜಾಕೆ ಮಾಧವ ಗೌಡ
ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಸಲಹೆಗಾರರಾದ ಪುರುಷೋತ್ತಮ ಪೂಜಾರಿ,
ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಬಿ.ಕೆ.ಮಾಧವ, ಐವರ್ನಾಡು ಪ್ರೌಢ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ದಯಾನಂದ ಕಟ್ಟತ್ತಾರು, ಗ್ರಾ.ಪಂ. ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ , ಕಾಲೇಜಿನ ಪ್ರಾಂಶುಪಾಲ ಮಹಮ್ಮದ್ ಇಸಾಕ್, ಸೂಫಿ ಪೆರಾಜೆ,ಭಾಗವಹಿಸಿದ್ದರು.

ಐವರ್ನಾಡು ಗೆಳೆಯರ ಬಳಗದ ಎಸ್.ಎನ್.ಮನ್ಮಥ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಸ್ವಾಗತ ಸಮಿತಿ ಸಂಚಾಲಕರಾದ ದಿನೇಶ್ ಮಾಡ್ತಿಲ ವಂದಿಸಿದರು.
ಗೆಳೆಯರ ಬಳಗದ ಅಧ್ಯಕ್ಷ ಸಾತ್ವಿಕ್ ಕುದುಂಗು ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕಣಿಲೆಗುಂಡಿ ಸಂಚಾಲಕರಾದ ವಾಸುದೇವ ಬೊಳುಬೈಲು ಮತ್ತಿತರರು ಉಪಸ್ಥಿತರಿದ್ದರು.