ಸುಳ್ಯ:ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ಸಂಘದ 12ನೇ ವಾರ್ಷಿಕೋತ್ಸವದ ಅಂಗವಾಗಿ ರಾಷ್ಟ್ರೀಯ ಎ ಗ್ರೇಡ್ ಕಬಡ್ಡಿ ಚಾಂಪಿಯನ್ಶಿಪ್ ‘ಸುಳ್ಯ ಕಬಡ್ಡಿ ಉತ್ಸವ’ಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಕಬಡ್ಡಿ ಉತ್ಸವವನ್ನು
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನನ್ನ ಪ್ರಧಾನ ಕಾರ್ಯದರ್ಶಿ ಅಕ್ಷಯ್.ಕೆ.ಸಿ. ಉದ್ಘಾಟಿಸಿದರು.
ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಜಿ.ಪಿ.ಸಂಶುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯದ ರಿಜಿಸ್ಟ್ರಾರ್ ಡಾ.ಉಜ್ವಲ್ ಯು.ಜೆ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ವರ್ತಕರ ಸಂಘದ ಗೌರವಾಧ್ಯಕ್ಷ ಪಿ.ಬಿ.ಸುಧಾಕರ ರೈ, ಪ್ರಮುಖರಾದ

ಎಸ್.ಸಂಶುದ್ದೀನ್, ಕಿರಣ್ ಚಂದ್ರ ಪುಷ್ಪಗಿರಿ, ಎನ್.ಜಯಪ್ರಕಾಶ್ ರೈ, ಎಂ.ವೆಂಕಪ್ಪ ಗೌಡ, ಪಿ.ಎಸ್.ಗಂಗಾಧರ, ಶಾಫಿ ಕುತ್ತಮೊಟ್ಟೆ, ಪಿ.ಎ.ಮಹಮ್ಮದ್, ಎ.ಸಿ.ವಸಂತ, ನವೀನ್ ಚಂದ್ರ, ನವೀನ್ ಸಂತೃಪ್ತಿ,, ರಿಯಝ್ ಸ್ಟಾರ್ ಟೈಲ್ಸ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗುರುದತ್ ನಾಯಕ್ ಸ್ವಾಗತಿಸಿದರು.
ಅಮೆಚೂರು ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾದ ನಿಯಮಾವಳಿಗಳಂತೆ ನಡೆಯುವ ಹೊನಲು ಬೆಳಕಿನ ಮ್ಯಾಟ್
ಪಂದ್ಯಾಟದಲ್ಲಿ ವಿವಿಧ ರಾಜ್ಯಗಳ ಆಹ್ವಾನಿತ 12 ಪುರುಷ ತಂಡಗಳು ಭಾಗವಹಿಸುತಿದೆ.










