ಕಡಬ:ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಿಗೆ ಪಕ್ಷದ ಚುನಾವಣಾ ಕಛೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಜಿಲ್ಲಾ
ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ರಾಕೇಶ್ ರೈ ಕೆಡೆಂಜಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿಜಯಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಪ್ರಮುಖರಾದ ಆಶಾ ತಿಮ್ಮಪ್ಪ, ಪುಲಸ್ಯ ರೈ, ಬಾಲಕೃಷ್ಣ ಬಾಣಜಾಲು, ಶ್ರೀಕೃಷ್ಣ ಎಂ.ಆರ್, ಪ್ರಸಾದ್ ಕಾಟೂರು ಉಪಸ್ಥಿತರಿದ್ದರು.





