ಕಡಬ:ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ಇವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಕಾರದಲ್ಲಿ ಪಕ್ಷ ಸಂಘಟನೆ
ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.
ಕಡಬ ಬ್ಲಾಕ್ ಕಾಂಗ್ರೆಸ್ನ ಹಿರಿಯ ಮುಖಂಡರಾದ ಸರ್ವೋತ್ತಮ ಗೌಡ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಎರಡು ಬಾರಿ ಪುತ್ತೂರು ತಾಲೂಕು ಪಂಚಾಯತ್ ಸದಸ್ಯರಾಗಿ ನೆಲ್ಯಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಇಂದು ಬೆಂಗಳೂರಿನಲ್ಲಿ ಅವರು ಆದೇಶ ಪತ್ರವನ್ನು ಪಡೆದಿದ್ದಾರೆ. ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು.