ಕಡಬ: ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ರಾಮಕುಂಜ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ವಿವಿಧ ತಾಲೂಕು ಸಮಿತಿಗಳನ್ನು ಪುನರ್ ರಚನೆ ಮಾಡಲಾಗಿದ್ದು ನೂತನ ಅಧ್ಯಕ್ಷರು ಹಾಗು
ಸಮಿತಿ ಸದಸ್ಯರ ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಜಿ.ಕೃಷ್ಣಪ್ಪ ಅವರು ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದರು. ಕಡಬ ತಾಲೂಕು ಗ್ಯಾರಂಟಿ ಸಮಿತಿಗೆ ಇತರ 14 ಮಂದಿ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ.







